
ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ನಾಲ್ವರು ವಾರಂಟ್ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಂದಿನ ಕ್ರಮಕ್ಕಾಗಿ ಅವರನ ಪಣಂಬೂರು, ಕೊಣಾಜೆ ಹಾಗೂ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಕುದ್ರೋಳಿ ನಡುಪಳ್ಳಿ ನಿವಾಸಿ ಮುನಾವರ್ ಮುಸ್ತಾಕ್(40) ಬಂಧಿತ ಆರೋಪಿ. ಈತ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಕೊಲೆಯತ್ನ, ದನಗಳವು ಹಾಗೂ ಬರ್ಕೆ ಠಾಣಾ ವ್ಯಾಪ್ತಿಯಲ್ಲಿ ಮಾದಕದ್ರವ್ಯ ಸೇವನೆ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ. ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಆತನನ್ನು ಮುಂದಿನ ಕ್ರಮಕ್ಕೆ ಕೊಣಾಜೆ ಠಾಣೆಗೆ ಹಸ್ತಾಂತರಿಸಲಾಗಿದ್ದಾರೆ. ಕಣ್ಣೂರು, ಅಡ್ಯಾರ್ ನಿವಾಸಿ ಮೊಹಮ್ಮದ್ ರಫೀಜ್(23) ಎಂಬಾತ ದ.ಕ.ಜಿಲ್ಲೆ, ಕಮಿಷನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಕಳವು, ಕೊಲೆಯತ್ನ, ಹಲ್ಲೆ ಸೇರಿದಂತೆ ಸುಮಾರು 9ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ. ಉಳ್ಳಾಲ ಕೋಟೆಕಾರು ಗ್ರಾಮ ನಿವಾಸಿ ಮಹಮ್ಮದ್ ನೌಫಾಲ್(32) ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ದರೋಡೆ, ಕೊಲೆ ಯತ್ನ, ಕೊಲೆ, ವಂಚನೆ ಹಾಗೂ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಮಾದಕದ್ರವ್ಯ ಸೇವನೆಗೆ ಸಂಬಂಧಪಟ್ಟ ಒಟ್ಟು 6 ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಬಳಿಕ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಆತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ತಣ್ಣೀರುಬಾವಿ ಕಸಬಾ ಬೆಂಗರೆಯ ನಿವಾಸಿ ನೌಷಾದ್ ಎಂಬಾತ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು ಮುಂದಿನ ಕ್ರಮಕ್ಕಾಗಿ ಪಣಂಬೂರು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.


