Visitors have accessed this post 252 times.
ಮಂಡ್ಯ ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬನ್ನೂರಿನ ರಾಮಕೃಷ್ಣ, ಗುರು, ಮೈಸೂರಿನ ಸೋಮಶೇಖರ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಎರಡು ಸ್ಕ್ಯಾನಿಂಗ್ ಯಂತ್ರ, ಒಂದು ಕಾರ್ ವಶಕ್ಕೆ ಪಡೆಯಲಾಗಿದೆ.
ಮಂಡ್ಯ ಜಿಲ್ಲೆಯ ಮೇಲುಕೋಟೆ, ಪಾಂಡವಪುರ, ಬೆಳ್ಳೂರು ಹಾಗೂ ಮೈಸೂರು ಜಿಲ್ಲೆ ನಂಜನಗೂಡು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 12 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನು 6-7 ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯಿದ್ದು, ಮಂಡ್ಯ ಪೊಲೀಸರು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.