Visitors have accessed this post 238 times.
ರಾಜ್ಯ ಸರಕಾರ ಎರಡನೇ ಹಂತದಲ್ಲಿ ರಾಜ್ಯದ 373 ಸರಕಾರಿ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ, 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ ಹಾಗೂ ಇತರ ಮಾಧ್ಯಮಗಳ ಜತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸುವಂತೆ ಆದೇಶ ಹೊರಡಿಸಿದೆ.
2024-25ರ ಶೈಕ್ಷಣಿಕ ಸಾಲಿನಲ್ಲಿ 1,419 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಮೊದಲ ಹಂತದಲ್ಲಿ ಅನುಮತಿ ನೀಡಿದ್ದ ಸರಕಾರವು ಈಗ 2ನೇ ಹಂತದಲ್ಲಿ 373 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಕ್ಕೆ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಅನು ಮೋದನೆ ನೀಡಿದೆ.ಕಳೆದ ಫೆಬ್ರವರಿ ತಿಂಗಳಲ್ಲಿ ಸರಕಾರ ಮಂಡಿಸಿದ ಆಯವ್ಯಯದಲ್ಲಿ ರಾಜ್ಯಾದ್ಯಂತ 2 ಸಾವಿರ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸುವುದಾಗಿ ಸಿಎಂ ಘೋಷಿಸಿದ್ದರು. ಆದರಂತೆ ಮೊದಲ ಹಂತದಲ್ಲಿ 1,419 ಹಾಗೂ 2ನೇ ಹಂತದಲ್ಲಿ 372 ಶಾಲೆ ಗಳ ಸಹಿತ ಈಗ ಒಟ್ಟು 1,791 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳು ನಡೆಸಲು ಅನುಮತಿ ನೀಡಿದಂತಾಗಿದೆ. ಆಂಗ್ಲ ಮಾಧ್ಯಮ ತರಗತಿ ಗಳನ್ನು ಸ್ಥಳೀಯ ಸಂಪನ್ಮೂಲಗಳನ್ನು ಬಳಸಿ ಪ್ರಾರಂಭಿಸಲು ಆದೇಶಿಸಿದೆ.