October 30, 2025
WhatsApp Image 2024-09-10 at 1.52.03 PM

ಕಾರ್ಕಳ ತಾಲೂಕಿನ ಸಾಣೂರು ಬಳಿಯ ಮನೆಯೊಂದರಲ್ಲಿ ಅನೈತಿಕ ದಂಧೆಯಲ್ಲಿ ತೊಡಗಿಕೊಂಡಿದ್ದ ಮಹಿಳೆ ಸಹಿತ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಕಳ ನಗರ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕಿ ಜಯಶ್ರೀ ಎಸ್. ಮಾನೆ ಅವರಿಗೆ ದೊರೆತ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿತ್ತು. ಈ ವೇಳೆ ಇಲ್ಲಿನ ಪ್ರಮೀಳಾ ವಿಜಯಕುಮಾ‌ರ್ ಅವರ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತಿತ್ತು ಎನ್ನಲಾಗಿದೆ. ದಾಳಿ ವೇಳೆ ಮನೆಯಲ್ಲಿದ್ದ ಭರತ್, ಮನೆ ಮಾಲಕಿ ಪ್ರಮೀಳಾ ವಿಜಯಕುಮಾರ್ ಅವರಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಓರ್ವ ಸಂತ್ರಸ್ತ ಮಹಿಳೆಯನ್ನು ರಕ್ಷಿಸಲಾಗಿದೆ. ಮನೆಯಲ್ಲಿ ಕೃತ್ಯಕ್ಕೆ ಬಳಸಿದ್ದ ಸೊತ್ತುಗಳನ್ನು ಶ್ವಾಧೀನಪಡಿಸಿಕೊಳ್ಳಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply