Visitors have accessed this post 626 times.
ಉಪ್ಪಿನಂಗಡಿ: ಎರಡು ಕಾರು ಹಾಗೂ ಕಂಟೈನರ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಮೃತ ಪಟ್ಟು ಇಬ್ಬರು ಗಾಯಗೊಂಡ ಘಟನೆ ಶಿರಾಡಿ ಘಾಟಿಯ ಕೆಂಪುಹೊಳೆ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಹಾಸನ ನಿವಾಸಿ ಚಂದ್ರೇಗೌಡ (50) ಎಂದು ಗುರುತಿಸಲಾಗಿದೆ. ಅದೇ ಕಾರಿನಲ್ಲಿದ್ದ ಚಿನ್ನೇಗೌಡ (31) ಹಾಗೂ ಶೀಲಾ (40) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು ಕಡೆಯಿಂದ ಹಾಸನ ಕಡೆಗೆ ಹೋಗುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ರಸ್ತೆಯಲ್ಲೇ ತಿರುಗಿದ ಕಾರು ಅದರ ಹಿಂದಿದ್ದ ಹಾಸನದ ಕಡೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇನ್ನೊಂದು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ