Visitors have accessed this post 337 times.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ ಅಲ್ಪಸಂಖ್ಯಾತರ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಯುವ ನ್ಯಾಯವಾದಿ ಮಹಮ್ಮದ್ ಅಸ್ಗರ್ ಮುಡಿಪು ಆಯ್ಕೆಯಾಗಿದ್ದಾರೆ.
ಬಿಜೆಪಿ ಬೂತ್ ಅಧ್ಯಕ್ಷನಾಗಿ, ಪಜೀರು ಗ್ರಾಮದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿರುವ ಯುವ ನ್ಯಾಯವಾದಿ ಮಹಮ್ಮದ್ ಅಸ್ಗರ್ ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಅಲ್ಪಸಂಖ್ಯಾತರ ಮೋರ್ಚಾದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.