ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೇರವಾಗಿ ದೇವರೊಂದಿಗೆ ಮಾತನಾಡುತ್ತೇವೆ ಎಂದು ಹೇಳುತ್ತಿದ್ದರು. ಆದರೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ಅವರನ್ನು ನಾವು ಮಾನಸಿಕವಾಗಿ ಸೋಲಿಸಿದ್ದೇವೆ ಎಂದು ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ಅಮೇರಿಕಾದ ಜಾರ್ಜ್‌ಟೌನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿರುವ ರಾಹುಲ್ ಗಾಂಧಿ, ಮೋದಿ ಅವರು ನೇರವಾಗಿ ದೇವರೊಂದಿಗೆ ಮಾತನಾಡುತ್ತೇನೆ ಎನ್ನುತ್ತಿದ್ದರು. ಆದರೆ, ಕಳೆದ ಚುನಾವಣೆಯಲ್ಲಿ ಅವರನ್ನು ನಾವು ಮಾನಸಿಕವಾಗಿ ಸೋಲಿಸಿದ್ದೇವೆ. ಈ ಚುನಾವಣಾ ಫಲಿತಾಂಶ ಬಂದ ಮೇಲೆ ಅವರ ಮಾನಸಿಕ ಸ್ಥಿತಿ ಬದಲಾಗಿದ್ದು, ಅವರು ಇನ್ನೂ ಆ ಪೆಟ್ಟಿನಿಂದ ಹೊರಗೆ ಬಂದಿಲ್ಲ ಎಂದಿದ್ದಾರೆ.