Visitors have accessed this post 788 times.
ಚೆನ್ನೈ : ತಮಿಳುನಾಡಿನ ಮಧುರೈನಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತವೊಂದು ಸಂಭವಿಸಿದ್ದು, ಹಾಸ್ಟೆಲ್ ನಲ್ಲಿ ಫ್ರಿಡ್ಜ್ ಸ್ಪೋಟಗೊಂಡು ಇಬ್ಬರು ಯುವತಿಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಧುರೈ ಜಿಲ್ಲೆಯ ಕಟ್ರಂಪಾಳ್ಯಂ ಪ್ರದೇಶದಲ್ಲಿರುವ ವಿಶಾಕಾ ಖಾಸಗಿ ಮಹಿಳಾ ಹಾಸ್ಟೆಲ್‌ನಲ್ಲಿ ಇಂದು ಮುಂಜಾನೆ 4:30 ರ ಸುಮಾರಿಗೆ ಫ್ರಿಡ್ಜ್ ಸ್ಫೋಟಗೊಂಡಿದೆ.
ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿತು. ಈ ಘಟನೆಯಲ್ಲಿ ರೆಫ್ರಿಜರೇಟರ್ ಬಳಿ ಮಲಗಿದ್ದ ಇಬ್ಬರು ಯುವತಿಯರು ಸಾವನ್ನಪ್ಪಿದ್ದಾರೆ. ಇನ್ನು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ದಟ್ಟ ಹೊಗೆ ಮತ್ತು ಭಾರೀ ಬೆಂಕಿಯಿಂದಾಗಿ ವಿಶಾಕಾ ಖಾಸಗಿ ಮಹಿಳಾ ಹಾಸ್ಟೆಲ್‌ನ ಕೆಲವು ಯುವತಿಯರು ಗಾಬರಿಯಿಂದ ಹೊರ ಓಡಿ ಬಂದಿದ್ದಾರೆ. ಹಾಸ್ಟೆಲ್ ನಲ್ಲಿದ್ದ ಪರಿಮಳ ಮತ್ತು ಶರಣ್ಯ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಭಾರೀ ಹೊಗೆಯಿಂದಾಗಿ ನಾಲ್ವರು ತೀವ್ರ ಅಸ್ವಸ್ಥಗೊಂಡಿದ್ದಾರೆ. 20ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮಹಿಳೆಯನ್ನು ರಕ್ಷಿಸಿದರು. ಘಟನೆ ವೇಳೆ ಹಾಸ್ಟೆಲ್‌ನಲ್ಲಿ 40ಕ್ಕೂ ಹೆಚ್ಚು ಮಂದಿ ಇದ್ದರು. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಫ್ರಿಡ್ಜ್ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.