ಪುತ್ತೂರು: ಸಹೋದರಿಯ ಮದುವೆ ಮಾಡುವ ಸಲುವಾಗಿ ಒಡಿಶಾದಿಂದ ರೈಲಿನಲ್ಲಿ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಸಿದ್ಧತೆ ನಡೆಸಿದ್ದ ಆರೋಪಿಯನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದ.ಕ. ಜಿಲ್ಲೆ ಯ ಪುತ್ತೂರು ಮೂಲದ ಬದ್ರುದ್ದೀನ್ ಬಂಧಿತ.
ಆತನಿಂದ 1 ಲಕ್ಷ ರೂ. ಮೌಲ್ಯದ 5 ಕೆ.ಜಿ 20 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ನಗರದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯು ಪರಿಚಿತನೊಬ್ಬನ ಸಲಹೆಯಂತೆ ಒಡಿಶಾಕ್ಕೆ ತೆರಳಿ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ.
ಹೊಟೇಲ್‌ನಲ್ಲಿನ ಸಂಬಳದಿಂದ ಕುಟುಂಬ ನಿರ್ವಹಣೆ ಕಷ್ಟವಾಗಿತ್ತು. ಜತೆಗೆ ಸಹೋದರಿ ಮದುವೆಯ ಹೊಣೆಗಾರಿಕೆ ಇದ್ದ ಕಾರಣ ಗಾಂಜಾ ಮಾರಾಟ ದಂಧೆಗೆ ಇಳಿದಿರುವುದಾಗಿ ಆರೋಪಿ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.