Visitors have accessed this post 491 times.
ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಖಂಡಿಸಿ ಬೆಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಹಿಂದೂ ಸಂಘಟನೆಯ ಗಣೇಶ ಉತ್ಸವ ಸಮಿತಿ ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ನಾಗಮಂಗಲದಲ್ಲಿ ಗಲಭೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿ.
ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಹಿಂದೂ ಸಂಘಟನೆಯ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.