
ಕಾರ್ಕಳ: ಮಗನ ಬಂಧನದಿಂದ ಮನನೊಂದ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಲ್ಲೂರು ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ನಲ್ಲೂರು ಗ್ರಾಮದ ಪ್ರೇಮ ಎಂದು ಗುರುತಿಸಲಾಗಿದೆ. ಇವರ ಮಗ ಸುಮಂತ್ ಎಂಬಾತನನ್ನು ಕಾರ್ಕಳ ನಗರ ಪೊಲೀಸರು ಒಂದೂವರೆ ತಿಂಗಳ ಹಿಂದೆ ವಾರಂಟ್ ಮೇಲೆ ಬಂಧಿಸಿದ್ದರು. ಹಿರಿಯಡ್ಕ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಗನನ್ನು ತಾಯಿ ಪ್ರೇಮ ಜೈಲಿಗೆ ಹೋಗಿ ಮಾತನಾಡಿಸಿಕೊಂಡು ಬಂದಿದ್ದರು. ನಂತರ ಇದೇ ಚಿಂತೆಯಿಂದ ಅವರು ಮನೆಯ ಹತ್ತಿರದಲ್ಲಿರುವ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


