ನಟ ದರ್ಶನ್ ಗೆ ಸೆ.30 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ!

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಹಲವರು ಜೈಲುಪಾಲಾಗಿದ್ದಾರೆ. ಇಂತಹ ನಟ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ಸೆ/30 ರವರೆಗೆ ವಿಸ್ತರಣೆ ಮಾಡಲಾಗಿದೆ.

ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಕೊನೆಗೊಂಡಿತ್ತು.

ಹೀಗಾಗಿ ಎಸ್‌ಐಟಿ ಪೊಲೀಸರು ಕೋರ್ಟ್ ಗೆ ಆರೋಪಿಗಳ ಮಾಹಿತಿ ಸಲ್ಲಿಕೆ ಮಾಡಿದ್ದರು.

ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ನ ನ್ಯಾಯಾಧೀಶರು ನಟ ದರ್ಶನ್ ಅಂಡ್ ಗ್ಯಾಂಗ್ ಗೆ ನ್ಯಾಯಾಂಗ ಬಂಧನದ ಅಧಿಯನ್ನು ಮತ್ತೆ ಸೆ.30ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ.

Leave a Reply