Visitors have accessed this post 125 times.

ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು

Visitors have accessed this post 125 times.

ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ. ಸ್ಕೂಟರ್‌ನಲ್ಲಿದ್ದ ಮತ್ತೋರ್ವ ಗಂಭೀರ ಗಾಯಗೊಂಡಿದ್ದು, ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು, ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಲಾರಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮೊದಲೇ ಶಿಥಿಲವಾಸ್ಥೆಯಲ್ಲಿ ಇರುವ ಈ ಸೇತುವೆಯಲ್ಲಿ ವೇಗವಾಗಿ ಲಾರಿ ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಅಪಘಾತದಿಂದ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಕಾರಣ ಕೆಲ ಕಾಲ ಸೇತುವೆ ಮೇಲೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಪೊಲೀಸರು ಮೃ*ತದೇಹವನ್ನು ಆಸ್ಪತ್ರೆಗೆ ರವಾನಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಸ್ಕೂಟರ್ ಸವಾರರು ಯಾರು ಅನ್ನೋ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

Leave a Reply

Your email address will not be published. Required fields are marked *