Visitors have accessed this post 554 times.
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂತರ ರೂ ಮೌಲ್ಯದ ನಗ, ನಗದು ಕಳವು ಮಾಡಿದ ಘಟನೆ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಮೋಂತಿಮಾರು ಎಂಬಲ್ಲಿ ನಡೆದಿದೆ.
ಆಸ್ಮ ಎಂಬವರ ದೂರಿನಂತೆ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಮೋಂತಿಮಾರು ಎಂಬಲ್ಲಿ ಗಂಡ ಮತ್ತು ಮಕ್ಕಳೊಂದಿಗೆ ವಾಸವಾಗಿರುತ್ತಾರೆ. ರಾತ್ರಿ ಸುಮಾರು 9 ಗಂಟೆಗೆ, ಮಕ್ಕಳೊಂದಿಗೆ ಮನೆಗೆ ಬೀಗ ಹಾಕಿ, ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ಹೋಗಿದ್ದು ರಾತ್ರಿ 12.45 ಗಂಟೆಗೆ ವಾಪಾಸು ಬಂದು ನೋಡಿದಾಗ ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಆಯುಧದಿಂದ ತುಂಡು ಮಾಡಿ , ಮನೆಯ ಒಳಗೆ ಪ್ರವೇಶಿಸಿ, ಗಾದ್ರೇಜ್ ಕಪಾಟಿನಲ್ಲಿದ್ದ 2 ಪವನ್ ಹಾಗೂ 2 ಗ್ರಾಂ ಚಿನ್ನಾಭರಣಗಳು ಮತ್ತು ರೂ 25,000/- ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ ರೂ 1,33,000/- ಆಗಬಹುದು ಎಂಬುದಾಗಿ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ: 86/2024 ಕಲಂ: 331(4), 305 ಭಾರತೀಯ ನ್ಯಾಯ ಸಂಹಿತೆ ರಂತೆ ಪ್ರಕರಣ ದಾಖಲಾಗಿರುತ್ತದೆ.