Visitors have accessed this post 504 times.
ಬೆಳಗಾವಿ:ಗಣೇಶ ವಿಸರ್ಜನೆಯ ವೇಳೆ ಮೂವರಿಗೆ ಚಾಕು ಇರಿದ ಘಟನೆ ಚೆನ್ನಮ್ಮ ವೃತ್ತದ ಬಳಿ ನಡೆದಿದೆ. ಘಟನೆ ಸಂಬಂಧ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾಹಿತಿ ನೀಡಿದ್ದಾರೆ.
ಗಾಯಾಳುಗಳನ್ನು ಸಮಾಜ ಕಲ್ಯಾಣ ವಸತಿ ನಿಲಯದ ವಿದ್ಯಾರ್ಥಿಗಳಾದ ಪ್ರವೀಣ್ ಗುಂಡ್ಯಾಗೋಳ್, ದರ್ಶನ್ ಪಾಟೀಲ್ ಮತ್ತು ಸತೀಶ್ ಪೂಜಾರಿ ಎಂಬುವುದಾಗಿ ಗುರುತಿಸಲಾಗಿದೆ. ಪ್ರವೀಣ್ ಗುಂಡ್ಯಾಗೋಳ್ ಎಂಬವರ ಸ್ಥಿತಿ ಗಂಭೀರವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಇಬ್ಬರಿಗೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಡ್ಯಾನ್ಸ್ ಮಾಡುವಾಗ ಕಾಲು ತಾಕಿದ್ದಕ್ಕೆ ಹುಡುಗರು ಕಿರಿಕ್ ಮಾಡಿಕೊಂಡಿದ್ದಾಗಿ ಹೇಳಲಾಗಿದೆ. ಬಳಿಕ ಮೆರವಣಿಗೆಯಿಂದ ಹೊರಬಂದು ಗಲಾಟೆ ಮಾಡಿದ್ದಾರೆ. ಈ ವೇಳೆ ಯುವಕರ ತಂಡವೊಂದು ಮೂವರು ಹಾಸ್ಟೆಲ್ ವಿದ್ಯಾರ್ಥಿಗಳ ಹೊಟ್ಟೆ, ಬೆನ್ನು, ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು, ಸ್ಥಳದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.