Visitors have accessed this post 1342 times.
ಶಾಲಾ ಶಿಕ್ಷಣ ಇಲಾಖೆ ಅಕ್ಟೋಬರ್ 3ರಿಂದ 20ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದೆ. ಇಡೀ ರಾಜ್ಯದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ.
ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಸ್ವಲ್ಪ ಮಾರ್ಪಾಡು ಆಗುತ್ತಿತ್ತು. ಈ ಬಾರಿ ಯಾವುದೇ ಮಾರ್ಪಾಡು ಮಾಡದೆ ಇಡೀ ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದೆ.
ಅಕ್ಟೋಬರ್ 3ರಿಂದ 20ರವರೆಗೆ 15 ದಿನಗಳ ಕಾಲ ದಸರಾ ರಜೆ ಇರಲಿದೆ. ಅಕ್ಟೋಬರ್ 21ರಿಂದ 2025 ಏಪ್ರಿಲ್ 10ವರೆಗೆ ಶೈಕ್ಷಣಿಕ ವರ್ಷದ ಎರಡನೇ ಅವಧಿ ನಡೆಯಲಿದೆ.
2024 -25ನೇ ಶೈಕ್ಷಣಿಕ ವರ್ಷದ ಶಾಲಾ ಅವಧಿ ಮಾರ್ಗದರ್ಶಿಯನ್ನು ಶಿಕ್ಷಣ ಇಲಾಖೆ ಶಾಲೆಗಳ ಆರಂಭಕ್ಕೂ ಮೊದಲೇ ಹೊರಡಿಸಿತ್ತು. ಅದರ ಅನುಸಾರ ರಜೆಗಳು ಘೋಷಣೆಯಾಗಿದ್ದು, ಅಕ್ಟೋಬರ್ ನಲ್ಲಿ 11 ದಿನಗಳು ಮಾತ್ರ ತರಗತಿಗಳು ನಡೆಯಲಿವೆ. 17 ದಿನ ದಸರಾ ರಜೆ ನೀಡಲಾಗಿದೆ.