
ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ.



ಶಾಸಕ ಮುನಿರತ್ನ ಅವರ ವಿರುದ್ಧ ಅತ್ಯಾಚಾರ ಪ್ರಕರಣ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು, ವಿಚಾರಣೆ ನಡೆಸಿದ ಕೋರ್ಟ್ ಮುನಿರತ್ನಗೆ 14 ದಿನಗಳ ಅಂದರೆ ಅಕ್ಟೋಬರ್ 5 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆ ಪೋಲೀಸರು ಬಿಜೆಪಿ ಶಾಸಕ ಮುನಿರತ್ನ ಅವರನ್ನು ಮತ್ತೆ ಬಂಧಿಸಿದ್ದಾರೆ.