ಮಂಗಳೂರು: ಸೌದಿ ಅರೇಬಿಯಾದ ದಮಾಮ್ ಬಳಿ ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ಸಮೀಪ ಉಳ್ಳಾಲ ನಿವಾಸಿಯಾಗಿದ್ದ ತಾಯಿ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತಪಟ್ಟವರು ಹೈದರ್ಉಳ್ಳಾಲ್ ಅವರ ಪುತ್ರಿ ಸಫಾ ಫಾತಿಮಾ (30) ಹಾಗೂ ಆಕೆಯ ಎರಡೂವರೆ ವರ್ಷದ ಮಗ ಲಯನ್ ಎಂದು ತಿಳಿದು ಬಂದಿದೆ.
ಮದೀನದಿಂದ ಕಾರಿನಲ್ಲಿ ಸಫಾ ಅವರು ಪತಿ ಮಲಪುರಂ ಆರಿ ಕೋಡ್ ಸ್ವದೇಶಿ ಸುಹೈಲ್ (35) ಮತ್ತು ಸಹೋದರ ಮುಹವಿಯ (23) ಜತೆಗೆ ದಮಾಮ್ನಲ್ಲಿ ರುವ ಹೈದರ್ ಅವರ ಮನೆಗೆ ತೆರಳುತ್ತಿದ್ದರು ಎನ್ನಲಾಗಿದೆ.
ಕಾರು ಚಲಾಯಿಸುತ್ತಿದ್ದ ಮುಹವಿಯ ನಿದ್ದೆಗೆ ಜಾರಿದ್ದೇ ಅಪಘಾತಕ್ಕೆ ಕಾರಣ. ಸುಹೈಲ್, ಮಕ್ಕಳಾದ ಅಬ್ದುಲ್ ಮಲಿಕ್ (7), ಅಬ್ದುಲ್ ರಹಿಮಾನ್ (6), ಅಹ್ಮದ್ (5), ಮುಹವಿಯ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.