ದಿನಾಂಕ 23-09-2024 ರಂದು ಕೇಂದ್ರೀಯ ಮಂಡಳಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಕುಂದಾಪುರ ತಾಲೂಕು ಘಟಕ ಅಧ್ಯಕ್ಷರಾಗಿ ಅಂತರಾಷ್ಟ್ರೀಯ ಪವರ್ ಲಿಫ್ಟಿಂಗ್ ಕ್ರೀಡಾಪಟು ಕಾಮನ್ವೆಲ್ತ್ ಚಿನ್ನದ ಪದಕ ವಿಜೇತ ಸತೀಶ್ ಖಾರ್ವಿ ಯವರನ್ನು
ತುಳುನಾಡ ರಕ್ಷಣಾ ವೇದಿಕೆ (ರಿ) ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಆಯ್ಕೆಯಾದ ಸತೀಶ್ ಖಾರ್ವಿ ರವರನ್ನು ತುಳುನಾಡ ವೇದಿಕೆ ಕೇಂದ್ರ ಮಂಡಳಿ ಅಧ್ಯಕ್ಷ ಯೋಗೇಶ್ ಶೆಟ್ಟಿ ಜಪ್ಪು ರವರು ಸಂಘಟನೆಯ ಶಾಲು ಹೊದಿಸಿ ಹೂ ಗುಚ್ಛ ನೀಡಿ ಅಭಿನಂದಿಸಿದರು. ಕೇಂದ್ರೀಯ ಮಂಡಳಿ ಕಚೇರಿ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ, ಉಡುಪಿ ಜಿಲ್ಲಾ ವೀಕ್ಷಕ ಫ್ರಾಂಕಿ ಡಿಸೋಜ ಕೊಳಲಗಿರಿ ಉಪಸ್ಥಿತರಿದ್ದರು