August 30, 2025
WhatsApp Image 2024-09-24 at 12.47.56 PM

ಬೆಂಗಳೂರು: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕುರ್ಚಿ ಬಗ್ಗೆ ರಾಜಕೀಯ ಪಡಸಾಲೆಯಲ್ಲಿ ಚರ್ಚೆ ಶುರುವಾಗಿದೆ. ಸಹಜವಾಗಿ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ಗೆ ಮೊರೆ ಹೊಗಲಿದ್ದಾರೆ. ಆದ್ರೆ ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಂದರ್ಭದಲ್ಲೂ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಜೊತೆಗೆ ಇರಲಿದ್ಯಾ.? ಈ ಮೊದಲು ಕಾನೂನು ಹೋರಾಟಕ್ಕೆ ನಮ್ಮ ಬೆಂಬಲ ಎಂದು ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಯ ನೀಡಿತ್ತು. ಆದ್ರೆ ಇದು ಸುಪ್ರೀಂ ಕೋರ್ಟ್ ಹೋದಮೇಲೂ ಈ ಬೆಂಬಲ ಇರಲಿದ್ಯಾ ಅನ್ನೋದು ಮುಂದಿನ ದಿನಗಳಲ್ಲಿ ತಿಳಿಯಲಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿದ್ದೆ. ಇದೇ ವಿಚಾರ ಇಟ್ಟುಕೊಂಡು ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸುವ ಸಾಧ್ಯತೆ ಇದೆ.‌ ಇನ್ನೊಂದೆಡೆ ರಾಜ್ಯ ಕಾಂಗ್ರೆಸ್‌ನಲ್ಲೂ ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರುವ ಸಾಧ್ಯತೆ ಇದೆ. ಈಗ ಸಿಎಂ ಸಿದ್ದರಾಮಯ್ಯ ನಡೆ ಏನಾಗಲಿದೆ? ರಾಜ್ಯ ಕಾಂಗ್ರೆಸ್ ನಾಯಕರು ಏನ್ ಹೇಳ್ತಾರೆ? ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಬೆಂಬಲಕ್ಕೆ ಈಗಲೂ ನಿಲ್ಲಲಿದ್ಯಾ ಕಾದು ನೋಡಬೇಕಿದೆ.

About The Author

Leave a Reply