
ಪುತ್ತೂರ: ಪುತ್ತೂರು ತಾಲೂಕಿನ ಕುರಿಯ ಗ್ರಾಮದ ವಿನ್ಯ ರೈ ಹಾಗೂ ತಂಡವು ಪುತ್ತೂರಿನ ವಿವೇಕಾನಂದ ಶಾಲೆಯಲ್ಲಿ ಶಿಕ್ಷಣ ನಡೆಸುತ್ತಿರುವ ಈ ವಿದ್ಯಾರ್ಥಿಗಳು 14/08/2024 ರಂದು ಕಲ್ಲಡ್ಕ ಶ್ರೀ ರಾಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಕಬ್ಬಡಿ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ . ಅದರ ನಂತರ ದಿನಾಂಕ 16/08/2024 ರಂದು ಹಾಸನದ ಮಂಗಳೂರು ಪಬ್ಲಿಕ್ ಶಾಲೆಯಲ್ಲಿ ಪ್ರಾಂತೀಯ ಮಟ್ಟದ ಕಬ್ಬಡಿ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಅಲ್ಲಿಯೂ ಪ್ರಥಮ ಸ್ಥಾನವನ್ನು ಪಡೆದು ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.. ತದನಂತರ ದಕ್ಷಿಣ ಮದ್ಯ ಕ್ಷೇತ್ರದಲ್ಲಿ ದಿನಾಂಕ 15/09/2024 ರಂದು ಭಾಗವಹಿಸಿದ ವಿದ್ಯಾರ್ಥಿಗಳು ಆಂದ್ರ ಪ್ರದೇಶದ ವಿಜ್ಞಾನ ವಿಹಾರದಲ್ಲಿ ನಡೆದ ಕ್ಷೇತ್ರೀಯ ಮಟ್ಟದಲ್ಲಿ ಭಾಗವಹಿಸಿ ಅಲ್ಲಿಯೂ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ..ವಿನ್ಯಾ ರೈ ಇವರು ಮೂಲತಃ ಪುತ್ತೂರು ತಾಲೂಕಿನ ಕುರಿಯ ಗ್ರಾಮದ ಲೋಕೇಶ್ ರೈ ಹಾಗೂ ಸುನಿತಾ ರೈ ದಂಪತಿಗಳ ಪುತ್ರಿ ಪುತ್ತೂರು ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಸ್ತುತ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ..


