August 30, 2025
WhatsApp Image 2024-09-27 at 9.32.23 AM

ಮಂಗಳೂರಿನ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಟಾಬೆಂಗ್ರೆಯ ಸಮುದ್ರ ಕಿನಾರೆಯಲ್ಲಿ ನಡೆದ  ಮುತ್ತು ಬಸವರಾಜ ವದ್ಧರ್‌ ಅಲಿಯಾಸ್ ಮುದುಕಪ್ಪ ನವರ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ತೋಟ ಬೆಂಗ್ರೆಯ ಧರ್ಮರಾಜ್ ಸುವರ್ಣ(50) ಬಂಧಿತ ಆರೋಪಿಯಾಗಿದ್ದಾನೆ. ಕೇರಳ ರಾಜ್ಯದ ಕೋಝಿಕ್ಕೋಡ್ ಜಿಲ್ಲೆಯ ಚೂಂಪಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ಕಾರ್ಯಾಚರಣೆ ನಡೆಸಿ ಪಣಂಬೂರು ಪೊಲೀಸರು ಆರೋಪಿಯನ್ರಿನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿಸಿದ್ದಾರೆ. ಸೆಪ್ಟೆಂಬರ್ 21 ರಂದು ಈ ಕೊಲೆ ನಡೆದಿತ್ತು. ಬಂಧಿತ ಆರೋಪಿ ಧರ್ಮರಾಜ್  ಮೀನುಗಾರಿಕಾ ಕೆಲಸ ಮಾಡಿಕೊಂಡಿದ್ದು, ತೋಟಾ ಬೆಂಗ್ರೆಯಲ್ಲಿ ವಾಸಮಾಡಿಕೊಂಡಿದ್ದ. ಆರೋಪಿ ಧರ್ಮರಾಜ್ ಸುವರ್ಣ ಮತ್ತು ಮೃತ ಮುತ್ತು ಬಸವರಾಜ ವಡ್ಡರ್ @ ಮುದುಕಪ್ಪ ಕಳೆದ ಕೆಲವು ಸಮಯದಿಂದ ಒಬ್ಬರಿಗೊಬ್ಬರು ಪರಿಚಯದವರಾಗಿದ್ದು, ಇತ್ತೀಚೆಗೆ ಆರೋಪಿಯ ಧರ್ಮರಾಜ್ ಸುವರ್ಣ ಹೊಸ ಮೊಬೈಲ್ ಖರೀದಿಸಿದ್ದು, ಆ ಮೊಬೈಲ್ ನ್ನು ಮೃತ ಮುತ್ತು ಬಸವಾರಾಜ್ ತೆಗೆದುಕೊಂಡು ವಾಪಾಸ್ ನೀಡದೆ ಮೊಬೈಲ್ ಹಾಳು ಮಾಡಿದ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿದೆ. ಈ ಸಂದರ್ಭ ಆರೋಪಿ ಧರ್ಮರಾಜ್  ಮುತ್ತು ಬಸವರಾಜ ವಡ್ಡರ್ @ ಮುದುಕಪ್ಪನನ್ನು ಮರದ ಸೋಂಟೆಯಿಂದ ಹೊಡೆದು ಕೊಲೆ ಮಾಡಿ ಬಳಿಕ ಪರಾರಿಯಾಗಿದ್ದ. ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ಐ.ಪಿ.ಎಸ್. ರವರ ಮಾರ್ಗದರ್ಶನದಂತೆ,  ಸಿದ್ದಾರ್ಥ ಗೋಯಲ್, ಐ.ಪಿ.ಎಸ್. ಡಿ.ಸಿ.ಪಿ (ಕಾನೂನು ಮತ್ತು ಸುವ್ಯವಸ್ಥೆ),  ಬಿ.ಪಿ ದಿನೇಶ್ ಕುಮಾರ್ ಡಿ.ಸಿ.ಪಿ. (ಅಪರಾಧ ಮತ್ತು ಸಂಚಾರ ವಿಭಾಗ), ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ  ಶ್ರೀಕಾಂತ.ಕೆ.ರವರ ಮಾರ್ಗದರ್ಶನದಲ್ಲಿ ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ  ಮೊಹಮ್ಮದ್ ಸಲೀಂ ಅಬ್ಬಾಸ್, ಪಣಂಬೂರು ಪೊಲೀಸ್ ಠಾಣಾ ಕಾನೂನು ಸುವ್ಯವಸ್ಥೆ ವಿಭಾಗದ ಉಪ ನಿರೀಕ್ಷಕರುಗಳಾದ ಶ್ರೀಮತಿ ಶ್ರೀಕಲಾ ಕೆ.ಟಿ, ಶ್ರೀ ಜ್ಞಾನಶೇಖರ ಹಾಗೂ ಎ.ಎಸ್.ಐ.ರವರುಗಳಾದ ಕೃಷ್ಣ. ಬಿ.ಕೆ. ಶ್ರೀಮತಿ ನಯನಾ ಹಾಗೂ ಸಿಬ್ಬಂದಿಗಳಾದ ಸಿ. ಹೆಚ್.ಸಿ.ಗಳಾದ ಸತೀಶ್ ಎಮ್ ಆರ್, ಸಯ್ಯದ್ ಇಂತಿಯಾಜ್, ಪ್ರೇಮಾನಂದ, ನವೀನ್ ಚಂದ್ರ, ಜೇಮ್ಸ್,ಪಿ.ಜೆ, ಸಿಪಿಸಿ ಗಳಾದ ಶಶಿಕುಮಾರ್, ರಾಕೇಶ್, ಮಾಣಿಕ್, ಸೋಮ್ಹಾ ನಾಯ್ಕ ಹಾಗೂ ಚಾಲಕ ಅಂಬಣ್ಣರವರುಗಳು ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.

About The Author

Leave a Reply