Visitors have accessed this post 462 times.
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಸಿಎಂ ವಿರುದ್ಧ ದಾಖಲಿಸಿ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದ್ದು, ಇಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಕುಟುಂಬಸ್ಥರ ವಿರುದ್ಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್‌ನಲ್ಲಿ A1 ಸಿದ್ದರಾಮಯ್ಯ,A2 ಪತ್ನಿ ಪಾರ್ವತಿ ಮತ್ತು A3 ಮಲ್ಲಿಕಾರ್ಜುನಸ್ವಾಮಿ ಎಂದು ಉಲ್ಲೇಖಿಸಲಾಗಿದೆ.