May 26, 2026
WhatsApp Image 2024-09-29 at 9.27.43 AM

ಪುತ್ತೂರು:  ಕಿಡಿಗೇಡಿಗಳು ರಾತ್ರಿ ವೇಳೆ ಅಂಗಡಿಯೊಂದಕ್ಕೆ ಬೆಂಕಿ ಹಚ್ಚಿರುವ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಶನಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಕುದ್ದುಪದವು ನಿವಾಸಿ ಅಶ್ರಫ್ ಎಂಬವರಿಗೆ ಸೇರಿದ ಅಂಗಡಿ‌ಗೆ ಬೆಂಕಿ ಹಚ್ಚಲಾಗಿದೆ. ಇತ್ತೀಚೆಗೆ ಅಂಗಡಿಗೆ ಬಂದಿದ್ದ ಅಪ್ರಾಪ್ತ ಬಾಲಕಿಗೆ ಅಶ್ರಫ್ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿದ್ದರು. ಇದೀಗ ಅವರ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗಿದೆ. ಘಟನೆ ನಡೆದ ಸ್ಥಳಕ್ಕೆ ವಿಟ್ಲ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

About The Author

Leave a Reply