Visitors have accessed this post 379 times.
ಮುಲ್ಕಿ: ಡೆತ್ ನೋಟ್ ಬರೆದಿಟ್ಟು ಬಾಲಕಿಯೊಬ್ಬಳು ಪ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ಸಮೀಪದ ಅತಿಕಾರಿಬೆಟ್ಟು ರೈಲ್ವೆ ಗೇಟ್ ಬಳಿಯ ಕ್ವಾಟರ್ಸ್ ನಲ್ಲಿ ಶನಿವಾರ ಸಂಜೆ ನಡೆದಿದೆ. ಕೊಂಕಣ ರೈಲ್ವೆ ಗೇಟ್ ಸಿಬ್ಬಂದಿ ಮಹೇಶ್ ನಾಯಕ್ ಎಂಬುವರ ಪುತ್ರಿ ಉಜ್ವಲ (17) ಮೃತ ಬಾಲಕಿ. ಬಾಲಕಿ ಉಜ್ವಲ ಮುಲ್ಕಿ ವಿಜಯ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಕಾಲೇಜಿನಲ್ಲಿ ನಡೆದ ಮೀಟಿಂಗ್ ಮುಗಿಸಿಕೊಂಡು ಮನೆ ಕಡೆ ಬಂದಿದ್ದು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ. ಈಕೆ ಆತ್ಮಹತ್ಯೆ ಸಂದರ್ಭ ತಂದೆ ಮಹೇಶ್ ನಾಯಕ್ ಮೈಲೊಟ್ಟು ರೈಲ್ವೇ ಗೇಟ್ ಬಳಿ ಕರ್ತವ್ಯಕ್ಕೆ ಹಾಜರಾಗಿದ್ದು, ತಾಯಿ ಊರಾದ ಭಟ್ಕಳಕ್ಕೆ ತೆರಳಿದ್ದು ಮೃತಳ ಅಣ್ಣ ಮುಕ್ಕ ಕಾಲೇಜಿನಲ್ಲಿ ಕಲಿಯುತ್ತಿದ್ದು ಕಾಲೇಜು ಮುಗಿಸಿ ಸಂಜೆ 6:30 ಗಂಟೆ ಸುಮಾರಿಗೆ ಮನೆಗೆ ಬಂದು ನೋಡುವಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮೃತಳ ರೂಮ್ ನಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಅದರಲ್ಲಿ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಗ್ಗೆ ಬರೆದಿದ್ದಾಳೆ. ತೋಟದ ಮನೆಯಲ್ಲಿ ಅಂತಿಮ ಕ್ರಿಯೆ ನಡೆಸಬೇಕು ಎಂದು ಹೇಳಿದ್ದಾಳೆ. ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.