Visitors have accessed this post 223 times.
ಉಡುಪಿ: ಉಡುಪಿ ನಗರದಲ್ಲಿ ಸರಣಿ ಕಳ್ಳತನ ನಡೆದಿದ್ದು ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ. ಉಡುಪಿಯ ಪೊಲೀಸ್ ಸ್ಟೇಷನ್ ಎದುರೇ ಇರುವ ಸರ್ಕಾರಿ ನೌಕರರ ವಸತಿ ಸಮುಚ್ಚಯದಲ್ಲಿ ಈ ಘಟನೆ ಸಂಭವಿಸಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ .ವಸತಿ ಸಮುಚ್ಚಯದ ಸುಮಾರು ಆರು ಮನೆಗಳಿಗೆ ಕಳ್ಳರು ನುಗ್ಗಿದ್ದು ,ನಗದು ಮತ್ತು ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.ವಿಷಯ ತಿಳಿದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು ಮಾಹಿತಿ ಕಲೆ ಹಾಕುತ್ತಿದ್ದಾರೆ.