Visitors have accessed this post 614 times.
ಮಂಗಳೂರು: ನಗರದ ಸಮೀಪ ಶಿಕ್ಷ,ಣ ಪಡೆಯುತ್ತಿರುವ ಯುವತಿಗೆ ಯುವಕನೊಬ್ಬ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸಿ ಕಿರುಕುಳ ನೀಡಿರುವ ಘಟನೆ ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ನಡೆದಿದೆ.
19 ವರ್ಷ ಯುವತಿ ಈ ಹಿಂದೆ ಸುರತ್ಕಲ್ ನಲ್ಲಿ ಕಲಿಯುತ್ತಿರುವಾಗ ಮಂಜನಾಡಿ ಬಳಿಯ ಮೊಹಮ್ಮದ್ ಶಾಕಿಬ್ ಎಂಬಾತ ಚೊಕ್ಕಬೆಟ್ಟಿನ ಸ್ನೇಹಿತೆಯ ಬಳಿಯಿಂದ ನಂಬರ್ ಪಡೆದುಕೊಂಡು ಯುವತಿಗೆ ಪ್ರತಿದಿನ ಮೆಸೇಜ್ ಮಾಡುತ್ತಿದ್ದ. ಯುವತಿಯ ಹಿಂದೆ ಬಿದ್ದಿದ್ದ ಶಾಕಿಬ್ ಆಕೆಗೆ ವಾಟ್ಸಾಪ್‌ನಲ್ಲಿ ಪ್ರತಿದಿನ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸುತ್ತಿದ್ದ. ಯುವತಿಗೆ ಮರ್ಮಾಂಗದ ಚಿತ್ರವನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದರಿಂದಾಗಿ ಮಾನಸಿಕವಾಗಿ ನೊಂದ ಯುವತಿ ಅನಾರೋಗ್ಯಕ್ಕೆ ತುತ್ತಾಗಿದ್ದಾಳೆ. ಆಕೆ ಕಡಿಮೆ ರಕ್ತದೊತ್ತಡದ ಸಮಸ್ಯೆಗೂ ಒಳಗಾಗಿ ಕಾಲೇಜಿಗೂ ಹೋಗಲಾಗದೆ ಮನೆಯಲ್ಲಿಯೇ ಉಳಿಯುವಂತ ಸ್ಥಿತಿಗೆ ಬಂದಿದ್ದಾಳೆ. ಈ ವಿಚಾರವನ್ನು ಯುವತಿ ಪೋಷಕರಿಗೆ ತಿಳಿಸಿದ್ದು, ಬಳಿಕ ಯುವಕನ ವಿರುದ್ಧ ದೂರು ದಾಖಲಿಸಿದ್ದಾರೆ.
ದೂರು ಸ್ವೀಕರಿಸಿದ ಪೊಲೀಸರು ಬೆಂಗಳೂರಿನಲ್ಲಿ ಕೆಲಸಕ್ಕಿದ್ದ ಶಾಕಿಬ್ ನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಯುವತಿ ಕಡೆಯವರು ಒಟ್ಟಾಗಿ ಠಾಣೆಯಲ್ಲಿ ಸೇರಿ ಯುವಕನ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.