
ದಕ್ಷಿಣ ಕನ್ನಡ-ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಆಕ್ಟೋಬರ್21 ರಂದು ಉಪಚುನಾವಣೆ ಚುನಾವಣೆ ನಡೆಯಲಿದ್ದು,ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು,ಕಾಂಗ್ರೆಸ್ ಗೆಲ್ಲುವ ಕುದುರೆಯ ತಲಾಷೆಯಲ್ಲಿದೆ ಮತ್ತು ಅಳೆದು ತೂಗಿ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಲಿಸುವ ಮೂಲಕ ಯಾವುದೇ ರೀತಿಯಲ್ಲದರೂ ಗೆಲ್ಲಲೇಬೇಕೆಂದು ಹೈಕಮಾಂಡ್ ಪಣತೊಟ್ಟಿರುವ ಕಾರಣ ಜಿಲ್ಲಾ ನಾಯಕರುಗಳಿಗೆ ಟಾಸ್ಕ್ ನೀಡಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.



ಕಾಂಗ್ರೆಸ್ ನಿಂದ ಆಕಾಂಕ್ಷಿಗಳು ಟಿಕೆಟಿಗಾಗಿ ಅರ್ಜಿ ಸಲ್ಲಿಸಿದ್ದು,ಇದಲ್ಲದೆ ಅಚ್ಚರಿಯ ಆಯ್ಕೆ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ..ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆಯ ದಿನಾಂಕವಾಗಿದ್ದು ಇಂದು ಸಂಜೆಯೊಳಗೆ ಅಭ್ಯರ್ಥಿ ಘೋಷಣೆಯಾಗಲಿದೆ..