ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿಯಾಗಿ ಜನಪರ ಹೋರಾಟಗಾರ, ದಕ್ಷ ರಾಜಕಾರಣಿ, ಜನ ಸಾಮಾನ್ಯರ ಜನಧ್ವನಿಯಾಗಿರುವ ಎಸ್‌ಡಿಪಿಐ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ರವರ ಹೆಸರನ್ನು ರಾಜ್ಯ ಸಮಿತಿ ಅಂತಿಮಗೊಳಿಸಿದ್ದು, ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ.
ಅಕ್ಟೋಬರ್ 21 ರಂದು ಉಪಚುನಾವಣೆ ನಡೆಯಲಿದ್ದು, (ಸೆ.3) ನಾಳೆ ಎಸ್‌ಡಿಪಿಐ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆ. ರಾಜ್ಯದಲ್ಲಿ ಕೋಮುವಾದ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿರುವ ಪಕ್ಷಗಳು ಮತ್ತು ಅದರ ಅಭ್ಯರ್ಥಿಗಳ ವಿರುದ್ಧವಾಗಿ ಸ್ಥಳೀಯ ಸಂಸ್ಥೆಗಳ ಬಗ್ಗೆ ಅರಿವು ಹೊಂದಿರುವ ಎಸ್‌ಡಿಪಿಐ ಪಕ್ಷದ ಅಭ್ಯರ್ಥಿ ಅನ್ವರ್ ಸಾದಾತ್ ಅತ್ಯಂತ ಸಮರ್ಥ ಅಭ್ಯರ್ಥಿಯಾಗಿದ್ದಾರೆ.