ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ಬೈಂದೂರಿನ ರಾಜು ಪೂಜಾರಿ, ಉಡುಪಿಯ ಉದಯ ಶೆಟ್ಟಿ ಮುಣಿಯಾಲು, ಕಾರ್ಕಳದ ಡಿ.ಆರ್.ರಾಜು, ಉಡುಪಿಯ ಹರಿಪ್ರಸಾದ್ ರೈ, ಬಿ.ಭುಜಂಗ ಶೆಟ್ಟಿ ಮತ್ತು ಬಂಟ್ವಾಳದ ಚಂದ್ರಪ್ರಕಾಶ ಶೆಟ್ಟಿ ತುಂಬೆ ಅವರು ಪಕ್ಷದ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರು.
ರಾಜು ಪೂಜಾರಿ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದನೆ ನೀಡಿರುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಬಿಜೆಪಿ ಸಹ ತನ್ನ ಅಭ್ಯರ್ಥಿಯನ್ನು ಕಿಶೋರ್ ಕುಮಾರ್ ಪುತ್ತೂರ್ಗೆ ಟಿಕೆಟ್ ನೀಡಲಾಗಿದ್ದು, ಇದೇ ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸ್ಥಾನದ ಮರು ಚುನಾವಣೆ ಅ.21 ರಂದು ಉಪಚುನಾವಣೆ ನಡೆಯಲಿದೆ.