January 16, 2026
WhatsApp Image 2024-10-03 at 2.54.18 PM

ಮಂಗಳೂರು: ವಿಧಾನ ಪರಿಷತ್‌ನ‌ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ಅ.21ರಂದು ನಡೆಯಲಿರುವ ಉಪ ಚುನಾವಣೆಗಯ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಯ ವೇಳೆ ವಿಧಾನ‌ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಕಾಂಗ್ರೆಸ್ ಮುಖಂಡರಾದ ರಮಾನಾಥ ರೈ, ಜಯಪ್ರಕಾಶ್ ಹೆಗ್ಡೆ ಜೊತೆಗಿದ್ದರು.

 

ಮಾಧ್ಯಮ ಪ್ರತಿನಿಧಿಗಳ‌ ಜೊತೆ ಮಾತನಾಡಿದ ರಾಜು ಪೂಜಾರಿ, ‘ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸದಸ್ಯನಾಗಿ ಕೆಲಸ ಮಾಡಿದ್ದೇನೆ.‌ ಸ್ಥಳೀಯ ಸಂಸ್ಥೆಗಳ ಸಮಸ್ಯೆ ಅರಿವಿದೆ. ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ನನ್ನ ಕಾರ್ಯವೈಖರಿ ಬಗ್ಗೆ, ಪಂಚಾಯತ್ ರಾಜ್ ವ್ಯವಸ್ಥೆಯ ಕುರಿತು ನನಗಿರುವ ಜ್ಞಾನದ ಬಗ್ಗೆ ಗೊತ್ತಿದೆ. ಹೀಗಾಗಿ, ಮತದಾರರು ನನ್ನನ್ನು ಬೆಂಬಲಿಸುವ ವಿಶ್ವಾಸ ಇದೆ’ ಎಂದರು.

30 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ‌ ವಿವಿಧ ಜವಾಬ್ದಾರಿ ನಿರ್ವಹಿಸಿದ್ದೇನೆ. ಪಕ್ಷ ನಿಷ್ಠೆಯನ್ನು ಗುರುತಿಸಿ ಕಾಂಗ್ರೆಸ್, ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ನೀಡಿದೆ’ ಎಂದು ಹೇಳಿದರು

About The Author

Leave a Reply