January 16, 2026
WhatsApp Image 2024-10-04 at 9.27.20 AM

ಮಂಗಳೂರು: ನಿಷೇಧಿತ ಮಾದಕದ್ರವ್ಯ ಗಾಂಜಾವನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು 4 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ನಿವಾಸಿ ಅಬುತಾಹಿರ್ ಅಲಿಯಾಸ್ ಅನ್ವರ್(25) ಬಂಧಿತ ಆರೋಪಿ. ಮಂಗಳೂರು ನಗರಕ್ಕೆ ಅಬುತಾಹಿರ್ ಗಾಂಜಾ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಪಡೀಲ್ ಪರಿಸರದಲ್ಲಿ ಆತನನ್ನು ಬಂಧಿಸಿದ್ದಾರೆ. ಈತ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ. ಅಬುತಾಹಿರ್‌ನನನ್ನು ವಶಕ್ಕೆ ಪಡೆದುಕೊಂಡು ಸಿಸಿಬಿ ಪೊಲೀಸರು 1,00,000 ರೂ. ಮೌಲ್ಯದ 4 ಕೆಜಿ ನಿಷೇಧಿತ ಗಾಂಜಾ ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಗಾಂಜಾ ಸಾಗಾಟಕ್ಕೆ ಉಪಯೋಗಿಸಿದ ದ್ವಿಚಕ್ರ ವಾಹನ, ಹಾಗೂ ಮೊಬೈಲ್ ಫೋನ್‌ಅನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸ್ವಾಧೀನಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,75,000 ರೂ. ಆಗಬಹುದೆಂದು ಅಂದಾಜಿಸಲಾಗಿದೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

About The Author

Leave a Reply