January 16, 2026
WhatsApp Image 2024-10-06 at 3.20.11 PM

ಸುಳ್ಯ: ಪ್ರಕರಣವೊಂದರ ವಾರಂಟ್ ಆರೋಪಿಯೋರ್ವ ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಕಲ್ಲುಗುಂಡಿ ಎಂಬಲ್ಲಿ ಕೆಲ ವರ್ಷಗಳ ಹಿಂದೆ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯಾದ ತಮಿಳುನಾಡು ಮೂಲದ ಕಾರ್ತಿಕ್ ಪರಾರಿಯಾಗಿರುವ ಆರೋಪಿ ಎಂದು ತಿಳಿದು ಬಂದಿದೆ.

ಆರೋಪಿಯನ್ನು ಸುಳ್ಯದ ಇಬ್ಬರು ಪೊಲೀಸ್ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು ಸುಳ್ಯದ ಸರಕಾರಿ ಆಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಕರೆದೊಯ್ದಿದ್ದು, ಈ ವೇಳೆ ಒರ್ವ ಸಿಬ್ಬಂದಿ ಚೀಟಿ ಮಾಡಿಸಲು ತೆರಳಿದ್ದ ಸಂದರ್ಭದಲ್ಲಿ ಇನ್ನೋರ್ವ ಸಿಬ್ಬಂದಿಯೊಂದಿಗಿದ್ದ ಆರೋಪಿ ಸಮಯ ಸಾಧಿಸಿ ಅಲ್ಲಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಆಸ್ಪತ್ರೆಯಿಂದ ಹೊರಬಂದ ಆರೋಪಿ ಹತ್ತಿರದ ತೋಟಕ್ಕೆ ಜಿಗಿದು ತಪ್ಪಿಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಕೂಡಲೇ ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದು, ತಡರಾತ್ರಿ ವರೆಗೂ ಹುಡುಕಾಟ ಮುಂದುವರಿಸಿದ್ದರು.

About The Author

Leave a Reply