
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಗುಂಡ್ಯ ಹೊಳೆಗೆ ಬಿದ್ದ ಪರಿಣಾಮ ಚಾಲಕ ಬಸ್‌ನ ಅಡಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಡಬದ ನೂಜಿಬಾಳ್ತಿಲ ಗ್ರಾಮದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.



ಚಾಲಕ ಭರತ್ (28) ಮೃತ ಬಸ್ ಚಾಲಕ ಕುಕ್ಕೆಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್-ಅಪ್ ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯ ವೇಳೆ ಡ್ರೈವರ್ ಮತ್ತು ಸಹ-ಡ್ರೈವರ್ ಮಾತ್ರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಪ್ರಯಾಣಿಕರಿಲ್ಲದ ಪರಿಣಾಮ ತಪ್ಪಿದ ಭಾರೀ ದುರಂತವೊಂದು ತಪ್ಪಿದಂತಾಗಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.