
ಉಡುಪಿ : ಹಿರಿಯಡ್ಕದ ಕೊಂಡಾಡಿ ಮೂಲದ ಪ್ರಸನ್ನ ಶೆಟ್ಟಿ (45) ತೀರ್ಥಹಳ್ಳಿಯ ವಸತಿ ಗೃಹವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಅವರು 3 ದಿನಗಳ ಹಿಂದೆ ತೀರ್ಥಹಳ್ಳಿಗೆ ಆಗಮಿಸಿ ವಸತಿಗೃಹದಲ್ಲಿ ವಾಸ್ತವ್ಯ ಹೂಡಿದ್ದರು. ಕೊಠಡಿಯಿಂದ ಯಾವುದೇ ಶಬ್ದ ಕೇಳಿಸದ್ದರಿಂದ ಅನುಮಾನಗೊಂಡ ಸಿಬಂದಿ ಬಾಗಿಲು ತೆರೆದು ನೋಡಿದಾಗ ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿತು. ಸುಮಾರು ಆರು ಪುಟಗಳ ಡೆತ್ ನೋಟ್ ಬರೆದಿಟ್ಟು ಸಾವಿನ ಕಾರಣ ವಿವರಿಸಿದ್ದಾರೆ. ಕೆಲವೊಂದು ಹೆಸರುಗಳನ್ನು ಬರೆದಿದ್ದು ಮತ್ತೆ ಕೆಲವು ತನ್ನ ವ್ಯವಹಾರದ ವಿಷಯಗಳನ್ನು ಬರೆದಿಟ್ಟಿದ್ದರು ಎಂದು ಪೊಲೀಸ್ ಮೂಲದಿಂದ ತಿಳಿದು ಬಂದಿದೆ. ಪ್ರಸನ್ನ ಶೆಟ್ಟಿ, ಬೆಂಗಳೂರಿನಲ್ಲಿ ರೆಸ್ಟೋರೆಂಟ್, ಬೇಕರಿ ಮತ್ತು ಹಣದ ವ್ಯವಹಾರವನ್ನು ನಡೆಸುತ್ತಿದ್ದರು.


