ರಾಮನಗರದಲ್ಲಿ ಪೈಶಾಚಿಕ ಘಟನೆಯೊಂದು ನಡೆದಿದ್ದು, ಲೈಂಗಿಕ ಕ್ರಿಯೆಗೆ ಅಡ್ಡಿ ಬರುತ್ತಿದ್ದಾರೆ ಎಂದು ಇಬ್ಬರು ಮಕ್ಕಳನ್ನು ತಾಯಿಯೊಬ್ಬಳು ಪ್ರಿಯಕರನ ಜೊತೆಗೆ ಸೇರಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ರಾಮನಗರದ ಕೆಂಪೇಗೌಡ ಸರ್ಕಲ್ ನಲ್ಲಿ ಪ್ರಿಯಕರನ ಜೊತೆಗೆ ಸೇರಿ ತಾಯಿಯೊಬ್ಬಳು 3 ವರ್ಷದ ಕಬಿಲ್ ಹಾಗೂ 11 ತಿಂಗಳ ಕಬಿಲನ್ ಎಂಬ ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾಳೆ.
ತಾಯಿ ಸ್ವೀಟಿ ಹಾಗೂ ಆಕೆಯ ಪ್ರಿಯಕರ ಗ್ರಗೋರಿ ಫ್ರಾನ್ಸಿಸ್ ಎಂಬಾತ ಇಬ್ಬರು ಲೈಂಗಿಕ ಕ್ರಿಯೆ ಮಾಡುವಾಗ ಮಕ್ಕಳು ಅಡ್ಡಿಯಾಗುತ್ತಾರೆಂದು ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದಾರೆ. ಸ್ವೀಟಿ ಈಗಾಗಲೇ ಶಿವು ಎಂಬಾತನ ಜೊತೆಗೆ ಮುದವೆಯಾಗಿದ್ದಳು, ಮದುವೆ ಬಳಿಕ ಫ್ರಾನ್ಸಿಸ್ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಳು. ಕೆಲ ದಿನಗಳ ಹಿಂದೆ ರಾಮನಗರಕ್ಕೆ ಬಂದಿದ್ದ ಸ್ವೀಟಿ ಇದೀಗ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದಾಳೆ.
ಸ್ಮಶಾನ ಸಿಬ್ಬಂದಿಯಿಂದ ಪ್ರಕರಣ ಬೆಳಕಿಗೆ ಬಂದಿದ್ದು, ಮಕ್ಕಳನ್ನು ಮಣ್ಣು ಮಾಡಲು ಹೋದಾಗ ಸ್ಮಶಾನ ಸಿಬ್ಬಂದಿ ಅನುಮಾನಗೊಂಡು ಮಗು ಏಕೆ ಸತ್ತಿದೆ ಎಂದು ಕೇಳಿದ್ದಾರೆ. ಇದಕ್ಕೆ ಸ್ವೀಟಿ, ಜ್ವರದಿಂದ ಮಗು ಮೃತಪಟ್ಟಿದೆ ಎಂದು ಹೇಳಿದ್ದಾರೆ. ಬಳಿಕ ಸ್ಮಶಾನ ಸಿಬ್ಬಂದಿ ಮೊಬೈಲ್ ನಲ್ಲಿ ಫೋಟೋ ತೆಗೆದುಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರಣೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.