Visitors have accessed this post 292 times.

ಸಿಎಂ ಸಿದ್ದರಾಮಯ್ಯ ಆಪ್ತ , ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ.ಮರೀಗೌಡ ರಾಜೀನಾಮೆ.!

Visitors have accessed this post 292 times.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿಯ ವಿರುದ್ಧ 14 ಸೈಟುಗಳ ಹಂಚಿಕೆಯ ಹಗರಣ ಆರೋಪ ಸದ್ದು ಮಾಡುತ್ತಿದೆ.

ಈ ನಡುವೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿದ್ದಾರೆ ಅಂತ ತಿಳಿದು ಬಂದಿದೆ.

ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಹಿನ್ನಲೆಯಲ್ಲಿ ಅವರು ತಮ್ಮ ರಾಜೀನಾಮೆಯನ್ನು ನೀಡಿದ್ದಾರೆ ಅಂಥ ತಿಳಿದು ಬಂದಿದೆ. ಈ ಮೊದಲೇ ಮರಿಗೌಡ ಅವರನ್ನು ಮುಡಾ ಅಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್​ನಲ್ಲಿ ಪರ ವಿರೋಧಗಳು ವ್ಯಕ್ತವಾಗಿದ್ದವು. ಆದರೂ ಸಹ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಮರಿಗೌಡ ಅವರನ್ನೇ ಮುಡಾ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು. ಆದ್ರೆ, ಇದೀಗ ಏಕಾಏಕಿ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಮರಿಗೌಡಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಹಿನ್ನಲೆಯಲ್ಲಿ ಅವರು ಇಂದು ರಾಜೀನಾಮೆಯನ್ನು ನೀಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *