Visitors have accessed this post 302 times.

ಮುಸ್ಲಿಂರ ವಿವಾಹ ನೋಂದಣಿ ಪ್ರಮಾಣಪತ್ರ ವಿತರಿಸುವ ಅಧಿಕಾರ ವಕ್ಫ್​ ಮಂಡಳಿಗೆ- ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್​

Visitors have accessed this post 302 times.

ಬೆಂಗಳೂರು: ಮುಸ್ಲಿಂ ಸಮುದಾಯದ ವಿವಾಹಿತ ದಂಪತಿಗೆ ವಿವಾಹ ನೋಂದಣಿ ಪ್ರಮಾಣಪತ್ರ ನೀಡುವ ಅಧಿಕಾರವನ್ನು ವಕ್ಫ್ ಮಂಡಳಿಗೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಈ ವಿಚಾರವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಆಲಿಸಿದ ನ್ಯಾಯಪೀಠ, ರಾಜ್ಯ ಸರಕಾರ, ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ, ರಾಜ್ಯ ವಕ್ಫ್ ಮಂಡಳಿಗೆ ನೋಟಿಸ್‌ ಜಾರಿಗೊಳಿಸಿ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ಸೂಚಿಸಿ ವಿಚಾರಣೆಯನ್ನು ನವೆಂಬರ್‌ 12ಕ್ಕೆ ಮುಂದೂಡಿತು.

Leave a Reply

Your email address will not be published. Required fields are marked *