ಪುತ್ತೂರು: ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ..!

ಪುತ್ತೂರು: ವ್ಯಕ್ತಿಯೊಬ್ಬರಿಗೆ ಇಬ್ಬರು ಸೇರಿ ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ತಿಂಗಳಾಡಿ ಎಂಬಲ್ಲಿ ನಡೆದಿದೆ. ತಿಂಗಳಾಡಿ ನಿವಾಸಿ, ಸ್ಥಳೀಯ ಕಾಂಗ್ರೆಸ್ ಮುಖಂಡ ರಘುನಾಥ ರೈ ಹಲ್ಲೆಗೊಳಗಾದವರು. ಸ್ಥಳೀಯರಾದ ನಿಶಾಂತ್ ಮತ್ತು ವಿಜಿತ್ ಹಲ್ಲೆ ನಡೆಸಿದ ಆರೋಪಿಗಳು. ತಿಂಗಳಾಡಿಯ ಅಂಗಡಿಯೊಂದರ ಬಳಿ ರಘುನಾಥ ರೈ ನಿಂತಿದ್ದಾಗ ಅಲ್ಲಿಗೆ ಆಗಮಿಸಿದ ಆರೋಪಿಗಳು ಮಾತಿಗೆ ಮಾತು ಬೆಳೆಸಿ ಹಲ್ಲೆ ನಡೆಸಿ ತಲೆಯನ್ನು ಹಿಡಿದು ಗೋಡೆಗೆ ಜಜ್ಜಿದ್ದಾರೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಗ್ರಾಮಾಂತರ ಸಂಪ್ಯ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಜಾಗದ ತಕರಾರಿಗೆ ಸಂಬಂಧಿಸಿ ಈ ಹಲ್ಲೆ ನಡೆದಿದೆ ಎಂದು ಪೊಲೀಸರ ಪ್ರಾಥಮಿಕ – ತನಿಖೆಯಲ್ಲಿ ತಿಳಿದು ಬಂದಿದೆ.

Leave a Reply