ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆಂಗೇರಿ ಕೆರೆಯಲ್ಲಿ ಕೊಚ್ಚಿ ಹೋಗಿದ್ದ ಅಣ್ಣ, ತಂಗಿ ಸಾವನ್ನಪ್ಪಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರಿನ ಕೆಂಗೇರಿ ಬಳಿ ನೀರು ತರಲು ಹೋಗಿದ್ದ ವೇಳೆ ಅಣ್ಣ, ತಂಗಿ ನಾಪತ್ತೆಯಾಗಿದ್ದರು.
ಅಗ್ನಿ ಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಇಬ್ಬರು ಸಾವನ್ನಪ್ಪಿರುವುದಾಗಿ ವರದಿಯಾಗಿದ್ದು, ಇದೀಗ ಅಣ್ಣ ಜಾನ್ ಸೀನಾ (13) ಶವ ಪತ್ತೆಯಾಗಿದ್ದು, ತಂಗಿ ಮಹಾಲಕ್ಷ್ಮಿ ಮಹೃದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಮೃತರ ತಾಯಿ ಬಿಬಿಎಂಪಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ನೀರು ತರಲು ಹೋಗಿದ್ದಾಗ ಆಟವಾಡ್ತಿದ್ದ ವೇಳೆ ನೀರಿಗೆ ಬಿದ್ದಿದ್ದರು.