August 30, 2025
WhatsApp Image 2024-10-23 at 11.18.06 AM

ಬೆಂಗಳೂರು :ನವೆಂಬರ್ 13ರಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಅಕ್ಟೋಬರ್​ 25ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಸಿಪಿ ಯೋಗೇಶ್ವರ್​ ಅವರು ನಾಮಪತ್ರ ಸಲ್ಲಿಕೆಗೆ ಒಂದು ದಿನ ಬಾಕಿ ಇರುವಾಗಲೇ ಬಿಗ್ ಅಪ್‌ಡೇಟ್ ಸಿಕ್ಕಿದೆ.

ಚನ್ನಪಟ್ಟಣದಲ್ಲಿ ಆಪರೇಷನ್‌ ಸಕ್ಸಸ್‌ ಆಗಿದೆ ಎಂದು ಹೇಳಲಾಗಿದೆ. ಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿರುವ ಮಾಹಿತಿ ಲಭ್ಯವಾಗಿದೆ. ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​​ ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆ ಎಂಬುವುದಾಗಿ ಘೋಷಿಸಿದ್ದರು. ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್​ಡಿಎ ಟಿಕೆಟ್​ ಸಿಗಬಹುದು ಎಂದು ಕಾದು ಕುಳಿತಿದ್ದರು. ಆದ್ರೆ, ಇದೀಗ​ ಯೋಗೇಶ್ವರ್​ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

 

About The Author

Leave a Reply