August 30, 2025
WhatsApp Image 2024-10-23 at 9.26.42 AM
ಮಂಗಳೂರು: ಎನ್‌ಡಿಪಿಎಸ್ ಆ್ಯಕ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆದ ಬಳಿಕ 4ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

 

ಉಳ್ಳಾಲ, ಒಳಪೇಟೆಯ, ಟಿ.ಸಿ.ರಸ್ತೆಯ ನಿವಾಸಿ ಸಲೀಂ ಅಲಿಯಾಸ್ ಮೊಹಮ್ಮದ್ ಸಲೀಂ(38) ಬಂಧಿತ ಆರೋಪಿ.

ಇಎನ್‌ಸಿ ಠಾಣೆಯಲ್ಲಿ ಕಲಂ : 8©,20(b) (ii) (a) NDPS ACT ಪ್ರಕರಣಕ್ಕೆ ಸಂಬಂಧಿಸಿದ 2019ರಲ್ಲಿ ಈತನನ್ನು ದಸ್ತಗಿರಿ ಮಾಡಲಾಗಿತ್ತು. ನ್ಯಾಯಾಲಯ ಈತನಿಗೆ ಜಾಮೀನು ನೀಡಿತ್ತು. ಬಳಿಕ ಈತನು ಇಲ್ಲಿಯವರೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

ಅಕ್ಟೋಬರ್ 22ರಂದು ಸೆನ್ ಕ್ರೈಂ ಪೊಲೀಸ್ ಠಾಣಾ ಸಿಬ್ಬಂದಿ ಆತನನ್ನು ಪತ್ತೆ ಮಾಡಿವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

About The Author

Leave a Reply