August 30, 2025
WhatsApp Image 2024-10-24 at 2.40.33 PM

ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 11ರ ಹರೆಯದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಬಡಕಬೈಲು ಮಹಮ್ಮದ್‌ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11) ಎಂದು ಗುರುತಿಸಲಾಗಿದೆ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಪಿಕಪ್‌ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಆಯಿಷಾ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವಾಗ ದಾರಿಮಧ್ಯೆ ಮೃತಪಟ್ಟಿದ್ದಾಳೆ. ರಿಕ್ಷಾದಲ್ಲಿದ್ದ ಇತರೆ ನಾಲ್ವರು ವಿದ್ಯಾರ್ಥಿಗಳು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ. ರಿಕ್ಷಾ ಚಾಲಕನಿಗೂ ಗಾಯವಾಗಿದೆ. ಗಾಯಾಳುಗಳನ್ನು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Leave a Reply