
“ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಸುರತ್ಕಲ್ ಇಡ್ಯಾದ ಅನ್ಯಕೋಮಿನ ಯುವಕನೊಬ್ಬ ನೆರೆಮನೆಯ ಯುವತಿಯೊಬ್ಬಳಿಗೆ ವಾಟ್ಸಾಪ್ ಸಂದೇಶ ಕಳುಹಿಸಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.



ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಈ ಯುವಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಈತ ಯುವತಿಯ ಸಹೋದರನಿಗೆ ವಾಟ್ಸ್‌ಆ್ಯಪ್ ಮೆಸೇಜ್ ಮಾಡಿ ಬೆದರಿಕೆ ಹಾಕಿದ್ದಾನೆ. ಇದರಿಂದ ಆತಂಕಗೊಂಡ ಯುವತಿಯ ಕುಟುಂಬ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸದ್ಯ ಸುರತ್ಕಲ್ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.