August 30, 2025
WhatsApp Image 2024-10-25 at 3.51.15 PM

ಹಾವೇರಿ : ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಇದೀಗ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಗುಲಿದ್ದು, ಕಾಂಗ್ರೆಸ್ ಯಾಸಿರ್ ಅಹಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಖಾದ್ರಿ ಅವರಿಗೆ ಟಿಕೆಟ್ ನೀಡಿರಲಿಲ್ಲ ಹಾಗಾಗಿ ಇಂದು ಖಾದ್ರಿ ಅವರು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

 

ಇದಕ್ಕೂ ಮುನ್ನ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅಜ್ಜಂಪಿರ್ ಖಾದ್ರಿ ಅವರ ಮನೆಗೆ ತೆರಳಿ ಅವರನ್ನು ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಮನವಳಿಕೆ ಪ್ರಯತ್ನ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಬೈಕ್ ನಲ್ಲಿ ತೆರಳಿ ಅಜ್ಜಂಪಿರ್ ಖಾದ್ರಿ ಅವರು ಓಡೋಡಿ ಹೋಗಿ ಕೊನೆಯ 13 ನಿಮಿಷಗಳು ಬಾಕಿ ಇರುವಾಗ ತಮ್ಮ ದಾಖಲೆಗಳೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಇತ್ತ ಸಚಿವ ಜಮೀರ್ ಅಹ್ಮದ್ ಖಾನ್ ತೆರಳುತ್ತಿದ್ದ ಕಾರಿನ ಮೇಲೆ ಕಲ್ಲಿನಿಂದ ದಾಳಿ ನಡೆಸಲಾಗಿದೆ. ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಗುಲಿದ್ದು ಹೂಲಗೂರು ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಚಿವ ಜಮೀರ್ ಅಹ್ಮದ್ ಖಾನ್ ತೆರಳುತ್ತಿದ್ದ ಕಾರಿಗೆ ಕಾರಿಗೆ ಕಲ್ಲಿನಿಂದ ದಾಳಿ ಮಾಡಿದ್ದಾರೆ.ಖಾದ್ರಿ ಅಭಿಮಾನಿಗಳು ಜಮೀರ್ ಅಹ್ಮದ್ ಖಾನ್ ಅವರ ಕಾರಿನ ಗಾಜು ಒಡೆದಿದ್ದಾರೆ.ಸಚಿವ ಜಮೀರ್ ಅಹ್ಮದ್ ಖಾನ್ ಚಲಸುತಿದ್ದ ಕಾರು ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾನ್ ಅವರಿಗೆ ಸೇರಿದ ಕಾರು ಎಂದು ಹೇಳಲಾಗುತ್ತಿದೆ.

About The Author

Leave a Reply