ಪುತ್ತೂರು: ರೈಲು ಹಳಿಯಲ್ಲಿ ಮೃತದೇಹ ಪತ್ತೆ..!

ಪುತ್ತೂರು: ಕಾರ್ಮಿಕರೊಬ್ಬರ ಮೃತದೇಹ ಪುತ್ತೂರಿನ ರೈಲು ಹಳಿಯಲ್ಲಿ ಗುರುವಾರ ಮಧ್ಯಾಹ್ನ ಪತ್ತೆಯಾಗಿದ್ದು, ಹಳಿ ದಾಟುವ ವೇಳೆ ರೈಲು ಡಿಕ್ಕಿಯಾಗಿ ಮೃತಪಟ್ಟಿಬಹುದು ಎಂದು ಶಂಕಿಸಲಾಗಿದೆ.

ಮೃತರನ್ನು ಪೆರ್ಲ ಉಕ್ಕಿನಡ್ಡ ಸಮೀಪದ ಸರ್ಪಂಗಳ ನಿವಾಸಿ, ತಿಮ್ಮನಾಯ್ಕ ಎಂಬವರ ಪುತ್ರ ಚನಿಯಪ್ಪ ಯಾನೆ ರಾಧಾಕೃಷ್ಣ ನಾಯ್ಕ (46) ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕಾರ್ಮಿಕರಾದ ಇವರು ಪುತ್ತೂರು ಸಮೀಪದ ಕಬಕ ಪರಿಸರದಲ್ಲಿ ಕೆಲಸ ನಿರ್ವಹಿಸುತ್ತಿದ್ದು, ವಾರಕ್ಕೊಮ್ಮೆ ಊರಿಗೆ ಹೋಗಿ ಬರುತ್ತಿದ್ದರು.

ಬುಧವಾರ ಬೆಳಗ್ಗೆ ತನ್ನ ಮನೆಯಿಂದ ತೆರಳಿದ್ದರು ಎನ್ನಲಾಗಿದೆ. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಈ ಬಗ್ಗೆ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply