August 30, 2025
a1

ಮಂಗಳೂರು : ಸಾಮಾನ್ಯವಾಗಿ ಉದ್ಯಮಿಗಳು ಹಾಗೂ ಬ್ಯಾಂಕ್ ನೌಕರರನ್ನು ಗುರಿಯಾಗಿಸಿಕೊಂಡು ಸೈಬರ್ ವಂಚಕರು ಅವರ ಖಾತೆಗಳನ್ನು ಹ್ಯಾಕ್ ಮಾಡುವುದು ಅಥವಾ ನಕಲಿ ಖಾತೆಗಳನ್ನು ಸೃಷ್ಟಿಸಿದ್ದನ್ನು ನೋಡಿದ್ದೇವೆ. ಆದರೆ ಇದೀಗ ಸೈಬರ್ ವಂಚಕರು ಒಂದು ಹೆಜ್ಜೆ ಮುಂದೆ ಹೋಗಿ ಪೊಲೀಸ್ ಕಮಿಷನರ್ ಹೆಸರಿನಲ್ಲೇ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದು ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೇ ಮಂಗಳೂರಲ್ಲಿ ನಡೆದಿದೆ.

 

ಹೌದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಅವುಗಳ ಮುಖಾಂತರ ಫ್ರೆಂಡ್ಸ್ ರಿಕ್ವೆಸ್ಟ್ ಗಳನ್ನ ಅಕ್ಸೆಪ್ಟ್ ಮಾಡಿಕೊಂಡು, ಮೆಸೆಂಜರ್ ಮುಖಾಂತರ ಹಣಕ್ಕೆ ಬೇಡಿಕೆ ಇಡುತ್ತಿದ್ದರು ಎಂದು ತಿಳಿದುಬಂದಿದೆ.

ಈ ವಿಚಾರ ತಿಳಿದ ಮಂಗಳೂರು ಪೊಲೀಸ್ ಆಯುಕ್ತ ​​​​ ಅನುಪಮ್ ಅಗರ್ವಾಲ್ ಅವರು ವಂಚಕರ ವಿರುದ್ಧ ಮಂಗಳೂರು ಸೆನ್​ ​ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ತಮ್ಮ ಹೆಸರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

About The Author

Leave a Reply