ಮಂಗಳೂರು: ಕಟೀಲು ಸಮೀಪದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಟೀಲು ಕೊಂಡೆಮೂಲದ ಸರಕಾರಿ ಆಸ್ಪತ್ರೆಯ ಹಿಂಭಾಗದ ನೀರಿನ ಟ್ಯಾಂಕ್ ಬಳಿ ವ್ಯಕ್ತಿಯೊಬ್ಬರ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ ಘಟನೆ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ತಾರಾನಾಥ (40) ಎಂದು ತಿಳಿದು ಬಂದಿದೆ.
ಸ್ಥಳೀಯರು ಈ ಘಟನೆ ಬಗ್ಗೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್, ಡಿಸಿಪಿ ಸಿದ್ಧಾರ್ಥ್ ಗೋಯಲ್, ಎಸಿಪಿ ಶ್ರೀಕಾಂತ್, ಬಜಪೆ ಇನ್‌ಸ್ಪೆಕ್ಟರ್ ಸಂದೀಪ್ ಅವರನ್ನೊಳಗೊಂಡ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.