January 16, 2026
WhatsApp Image 2024-10-31 at 9.31.32 AM
ಮಂಗಳೂರು:  ತಿರುವೈಲು ಗ್ರಾಮದಲ್ಲಿ ನಿರ್ಮಿಸಿದ್ದ ಮೊಬೈಲ್‌ ಟವರ್‌ ಅನ್ನು ಉಪಕರಣಗಳ ಸಹಿತ ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಮುಂಬಯಿಯ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿರುವ ಜಿ.ಟಿ.ಎಲ್‌. ಇನ್‌ಫ್ರಾಸ್ಟ್ರಕ್ಚರ್‌ ಕಂಪೆನಿ ಲಿ.ನವರು ಮೊಬೈಲ್‌ ಟವರ್‌ ನಿರ್ಮಾಣ ಮಾಡಿದ್ದರು ಎನ್ನಲಾಗಿದೆ.
ಇತ್ತೀಚೆಗೆ ಟವರ್‌ನ ನಿರ್ವಹಣೆಯ ಉಸ್ತುವಾರಿ ವಹಿಸಿದ್ದ ಟೆಕ್ನೀಷಿಯನ್‌ ಪರಿಶೀಲನೆಗಾಗಿ ಸ್ಥಳಕ್ಕೆ ಭೇಟಿ ನೀಡಿದಾಗ ಮೊಬೈಲ್‌ ಟವರ್‌ ಮತ್ತು ಟವರ್‌ನ ಉಪಕರಣಗಳು ಸೇರಿದಂತೆ ಒಟ್ಟು ಸುಮಾರು 19 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವುದು ಗಮನಕ್ಕೆ ಬಂದಿದೆ.
ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

About The Author

Leave a Reply