ಬೆಂಗಳೂರು :ಶಕ್ತಿ ಯೋಜನೆ ಪರಿಷ್ಕರಣೆಯ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ”. ಎಲ್ಲಾ ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಮುಂದುವರೆಯಲಿವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ಮಾಡುತ್ತಿರುವುದು ವಿಪರ್ಯಾಸ.
ತಮ್ಮ ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು ನೋಟೀಸ್ ಗಳನ್ನು ನೀಡಿದ್ದಾರೆ. ಇದು ಇಬ್ಬದಿ ರಾಜಕೀಯ ನಡೆ. ಯಾವ ರೈತರನ್ನೂ ಒಕ್ಕಲೆಬ್ಬಿಸಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇವೆ. ಕೊಟ್ಟಿರುವ ನೋಟೀಸ್ ಗಳನ್ನು ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ. ರೈತರು ಆತಂಕಪಡುವ ಅಗತ್ಯವಿಲ್ಲ ಎಂದರು.
ನವೆಂಬರ್ 4ರ ಅವರ ಪ್ರತಿಭಟನೆ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತವಾದದ್ದು, ಸಮಸ್ಯೆಗಳು ಇರದೆ ಕಡೆ ಅವರೇ ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಈಗ ಮುಡಾ ಪ್ರಕರಣದಲ್ಲಿ ಮಾಡಿಲ್ಲವೇ? ಎಂದು ಹೇಳಿದ್ದಾರೆ.